×
Ad

ಉಳ್ಳಾಲ: ಮಾ.19ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ಹಾಗೂ ಕಣ್ಣಿನ ತಪಾಸಣಾ ಶಿಬಿರ

Update: 2017-03-17 16:45 IST

ಉಳ್ಳಾಲ,  ಮಾ.17: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ, ಮಂಗಳೂರು ಮತ್ತು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ಘಟಕ, ಬಂಡಿಕೋಟ್ಯ, ಉಳ್ಳಾಲ ಹಾಗೂ ವಿದ್ಯಾರಣ್ಯ ಯುವಕ ವೃಂದ (ರಿ) ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ, ಉಳ್ಳಾಲ ನಗರಸಭೆಯ ಸಹಕಾರದೊಂದಿಗೆ ಮಾ.19ರಂದು ಉಚಿತ ವೈದ್ಯಕೀಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.

ಉಳ್ಳಾಲ ನಗರಸಭೆಯ ಸಮುದಾಯ ಭವನ ಮಾ.19 ರವಿವಾರ ಬೆಳಗ್ಗೆ 9:30ರಿಂದ ಮದ್ಯಾಹ್ನ 2:30ರವರೆಗೆ ಶಿಬಿರ ನಡೆಯಲಿದೆ. ಕೆಎಂಸಿ ಆಸ್ಪತ್ರೆ ಅತ್ತಾವರದ ನುರಿತ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಕಣ್ಣಿನ ತಪಾಸಣೆ ಮತ್ತು ಕನ್ನಡಕ ವಿತರಣೆ ಮಾಡಲಾಗುವುದು.

 ಈ ಶಿಬಿರದಲ್ಲಿ ಚರ್ಮ, ಎಲುಬು, ಕಣ್ಣು, ಕಿವಿ, ಮೂಗು, ಗಂಟಲು, ಸ್ತ್ರೀ ರೋಗ, ಮಕ್ಕಳ ಚಿಕಿತ್ಸೆ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣೆ. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು ಹಾಗೂ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗುವುದು. ಹೆಚ್ಚಿನ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದಲ್ಲಿ ಕೆಎಂಸಿ ಆಸ್ಪತ್ರೆಯ ಹಸಿರು ಕಾರ್ಡು ನೀಡಲಾಗುವುದು, ಇದರಲ್ಲಿ ಶಸ್ತ್ರಚಿಕಿತ್ಸೆ ರೂ. 10,000/- ಹಾಗೂ ಒಳರೋಗಿಗಳಾಗಿ ದಾಖಲಾದಲ್ಲಿ ಚಿಕಿತ್ಸೆಯಲ್ಲಿ ರೂ. 5,000/- ರಿಯಾಯಿತಿಯನ್ನು ಪಡೆಯಬಹುದು.

ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ  ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News