ನಾಳೆ ತ್ರಿವೇಂದ್ರ ಸಿಂಗ್ ರಾವತ್ ಉತ್ತರಾಖಂಡ್ ಮುಖ್ಯ ಮಂತ್ರಿಯಾಗಿ ಪ್ರಮಾಣ
Update: 2017-03-17 17:53 IST
ಡೆಹ್ರಾಡೂನ್ , ಮಾ.17: ಉತ್ತರಾಖಂಡ್ ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಉತ್ತರಾಖಂಡ್ ನ ನೂತನ ಮುಖ್ಯಮಂತ್ರಿಯಾಗುವ ಅವಕಾಶ ಒದಗಿ ಬಂದಿದೆ.
ಶನಿವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಉತ್ತರಾಖಂಡ್ ನ ನೂತನ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕೇಂದ್ರ ನಾಯಕರಾದ ಸರೋಜ್ ಪಾಂಡೇ ಹಾಗೂ ನರೇಂದ್ರ ತೋಮರ್ ಅವರ ನೇತೃತ್ವದಲ್ಲಿ ಇಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ.