ಅಕ್ರಮ ಮರಳು ಸಾಗಾಟ ಮಾಡುತಿದ್ದ ಎರಡು ಲಾರಿ ವಶ
Update: 2017-03-17 22:26 IST
ಬೆಳ್ತಂಗಡಿ, ಮಾ.17: ಅಕ್ರವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಶುಕ್ರವಾರ ಬೆಳ್ತಂಗಡಿ ಪೋಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬೆಳ್ತಂಗಡಿ ಪೋಲಿಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಿಪಿಐ ನಾಗೇಶ ಕದ್ರಿ ನೇತೃತ್ವದಲ್ಲಿ ಪಿ.ಎಸ್.ಐ ರವಿ ಹಾಗೂ ಸಿಬ್ಬಂದಿಗಳು ವಶಕ್ಕೆ ಪಡೆದು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.