×
Ad

ಮಾ.19ರಂದು ಮಾರಿಪಳ್ಳದಲ್ಲಿ ರಕ್ತದಾನ ಶಿಬಿರ

Update: 2017-03-18 11:44 IST

ಫರಂಗಿಪೇಟೆ, ಮಾ.18: ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಪುದುಪೇಟೆ ಮಾರಿಪಳ್ಳ ಇದರ ವತಿಯಿಂದ ಹಾಗೂ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ರಕ್ತದಾನ ಶಿಬಿರವು ಮಾ.19ರಂದು ಬೆಳಗ್ಗೆ 9:30ಕ್ಕೆ ಮಾರಿಪಳ್ಳ ಸುಜೀರು ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ. 

ಶಿಬಿರವನ್ನು ಕರ್ನಾಟಕ ದಾರಿಮಿ ಅಸೋಸಿಯೇಶನ್‌ನ ಉಪಾಧ್ಯಕ್ಷ ಮಾಯಿನ್ ದಾರಿಮಿ ಮತ್ತು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಫಾ.ರೋಶನ್ ಕ್ರಾಸ್ತಾ ಉದ್ಘಾಟಿಸಲಿದ್ದಾರೆ. ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್.ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿಪಂ ಸದಸ್ಯ ರವೀಂದ್ರ ಕಂಬಳಿ, ತಾಪಂ ಸದಸ್ಯೆ ಪದ್ಮಶ್ರೀ ಶೆಟ್ಟಿ, ಪುದು ಗ್ರಾಪಂ ಅಧ್ಯಕ್ಷೆ ಆತಿಕಾ, ಉಪಾಧ್ಯಕ್ಷ ಹಾಶೀರ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೋಡಾಜೆ ಸಹಿತ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಭಾಗವಹಿಸಿ ರಕ್ತದಾನ ಮಾಡುವಂತೆ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News