ಉತ್ತರಾಖಂಡ ಸಿಎಂ ಆಗಿ ತ್ರಿವೇಂದ್ರ ಸಿಂಗ್ ಪದಗ್ರಹಣ
Update: 2017-03-18 15:12 IST
ಡೆಹ್ರಾಡೂನ್, ಮಾ.18: ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಕೃಷ್ಣಕಾಂತ್ ಪೌಲ್ ಅವರು ರಾವತ್‌ಗೆ ಪ್ರಮಾಣವಚನ ಬೋಧಿಸಿದರು. ಕೇಂದ್ರ ಸಚಿವ ರಾಜ್‌ನಾಥ್ ಸಿಂಗ್ ಕಾರ್ಯಕ್ರಮದಲ್ಲಿ ಹಾಜರಿದ್ದರು.