ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಆದಿತ್ಯನಾಥ್ ಆಯ್ಕೆ
Update: 2017-03-18 18:17 IST
ಲಕ್ನೋ, ಮಾ.18: ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಸಂಸದ ಯೋಗಿ ಆದಿತ್ಯನಾಥ್ ಆಯ್ಕೆಯಾಗಿದ್ದಾರೆ.
ಶನಿವಾರ ಇಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಗೋರಖ್‌ಪುರ ಸಂಸದ ಆದಿತ್ಯನಾಥ್‌ರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು.
ಲಕ್ನೋದ ಸ್ಮತಿ ಉಪಭವನದಲ್ಲಿ ರವಿವಾರ ಮಧ್ಯಾಹ್ನ 2:30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿ ಹುದ್ದೆಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಅಂತಿಮವಾಗಿ ಆದಿತ್ಯನಾಥ್‌ರನ್ನು ಆಯ್ಕೆ ಮಾಡಲಾಗಿದೆ.