ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಹುಮಾನದ ಚೆಕ್ ವಿತರಣೆ
Update: 2017-03-20 18:46 IST
ಉಡುಪಿ, ಮಾ.20: ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲೆಯ 22 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕರ ಬಹುಮಾನದ ಚೆಕ್‌ಗಳನ್ನು ವಿತರಿಸಿದರು.
ರಾಜ್ಯದ ಒಟ್ಟು 250 ವಿದ್ಯಾರ್ಥಿಗಳು ಈ ಬಹುಮಾನಕ್ಕೆ ಭಾಜನರಾಗಿದ್ದು, ಎಸ್ಸೆಸೆಲ್ಸಿ ವಿದ್ಯಾರ್ಥಿಗಳು ತಲಾ ರೂ. 10,000ವನ್ನು ಪಡೆದರೆ, ಪಿಯುಸಿ ವಿದ್ಯಾರ್ಥಿಗಳು ರೂ.20,000ದ ಚೆಕ್‌ಗಳನ್ನು ಸ್ವೀಕರಿಸಿದರು.
ಜಿಲ್ಲೆಯ ಸರಕಾರಿ ಉರ್ದು ಶಾಲೆಗಳಿಗೆ 9 ಅಂಶಗಳ ಕಾರ್ಯಕ್ರಮದಡಿ ಎಸ್ಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಕ ಬಹುಮಾನದ ಚೆಕ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಹರೀಶ್ ಗಾಂವ್ಕರ್ ಉಪಸ್ಥಿತರಿದ್ದರು.