304 ವಿದ್ಯಾರ್ಥಿಗಳು ಗೈರು

Update: 2017-03-20 18:58 GMT

ಮಂಗಳೂರು, ಮಾ.20: ದ.ಕ. ಜಿಲ್ಲೆಯಲ್ಲಿ ಸೋಮವಾರ ವಿವಿಧ ವಿಷಯಗಳಲ್ಲಿ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 304 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ರಸಾಯನಶಾಸ್ತ್ರ ಪರೀಕ್ಷೆಗೆ 15,050 ವಿದ್ಯಾರ್ಥಿಗಳು ಹಾಜರಾಗಿದ್ದು, 74 ಮಂದಿ ಗೈರು ಹಾಜರಾಗಿದ್ದಾರೆ. ವ್ಯವಹಾರ ಅಧ್ಯಯನ ಪರೀಕ್ಷೆಗೆ 16,784 ಹಾಜರಾಗಿದ್ದು, 229 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಐಚ್ಛಿಕ ಕನ್ನಡ ಪರೀಕ್ಷೆಗೆ 57 ವಿದ್ಯಾರ್ಥಿಗಳು ಹಾಜರಾಗಿದ್ದು, ಓರ್ವ ವಿದ್ಯಾರ್ಥಿ ಗೈರು ಹಾಜರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News