ಉಡುಪಿಯಲ್ಲಿ 133 ಮಂದಿ ಗೈರು

Update: 2017-03-20 18:59 GMT

ಉಡುಪಿ, ಮಾ.20: ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿಯ ಎರಡು ಪರೀಕ್ಷೆಗಳಿಗೆ ಒಟ್ಟು 133 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ರಾಸಾಯನಿಕ ಶಾಸ್ತ್ರ ಪರೀಕ್ಷೆಗೆ 5,156 ಮಂದಿ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 5128 ಮಂದಿ ಪರೀಕ್ಷೆ ಬರೆದು 28 ಮಂದಿ ಗೈರುಹಾಜರಾಗಿದ್ದಾರೆ. ಬಿಸಿನೆಸ್ ಸ್ಟಡೀಸ್ ಪರೀಕ್ಷೆಗೆ ಜಿಲ್ಲೆಯಲ್ಲಿ ಹೆಸರು ನೋಂದಾಯಿಸಿಕೊಂಡ 8,837 ವಿದ್ಯಾರ್ಥಿಗಳಲ್ಲಿ 8,732 ಮಂದಿ ಹಾಜರಾಗಿದ್ದಾರೆ. 105 ಮಂದಿ ಗೈರುಹಾಜರಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಅಕ್ರಮ, ಅವ್ಯವಹಾರಗಳು ನಡೆದಿಲ್ಲ ಎಂದು ಡಿಡಿಪಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News