ಅಯೋಧ್ಯೆಯಲ್ಲಿ ರಾಮಾಯಣ ಮ್ಯೂಸಿಯಂ: ಆದಿತ್ಯನಾಥ್
Update: 2017-03-21 14:44 IST
ಲಕ್ನೋ, ಮಾ.21: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಾಯಣ ಮ್ಯೂಸಿಯಂ ನಿರ್ಮಾಣಕ್ಕೆ 25 ಎಕರೆ ಭೂಮಿ ಮಂಜೂರು ಮಾಡಿರುವ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇಂದ್ರದ ಯೋಜನೆಗೆ ಹಸಿರು ನಿಶಾನೆ ತೋರಿದ್ದಾರೆ.
ಅಯೋಧ್ಯೆಯಲ್ಲಿ ರಾಮಾಯಣ ಮ್ಯೂಸಿಯಂ ನಿರ್ಮಾಣಕ್ಕೆ ಸರಕಾರ ಬದ್ಧವಾಗಿದ್ದು, ಇನ್ನು ಒಂದು ವಾರದಲ್ಲಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಆದಿತ್ಯನಾಥ್ ಘೋಷಿಸಿದ್ದಾರೆ.
ಕೇಂದ್ರ ಸರಕಾರ ತನ್ನ ಬಜೆಟ್‌ನಲ್ಲಿ ರಾಮಾಯಣ ಮ್ಯೂಸಿಯಂ ನಿರ್ಮಾಣಕ್ಕೆ ಸುಮಾರು 100 ಕೋ.ರೂ. ತೆಗೆದಿರಿಸಿದೆ.