ಮಾ.24ರಂದು ಬಿಸಿಸಿಐ ಪ್ರಕರಣ ವಿಚಾರಣೆ ನಡೆಸಲಿರುವ ಸುಪ್ರೀಂ

Update: 2017-03-21 17:51 GMT

 ಹೊಸದಿಲ್ಲಿ, ಮಾ.21: ಜಸ್ಟಿಸ್ ಲೋಧಾ ಸಮಿತಿಯ ಶಿಫಾರಸುಗಳ ಅನುಷ್ಠಾನ ಸಹಿತ ಬಿಸಿಸಿಐಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಸುಪ್ರೀಂಕೋರ್ಟ್ ಮಾ.24, ಶುಕ್ರವಾರ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಜಸ್ಟಿಸ್ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಶುಕ್ರವಾರ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದೆ.

 ವಿಚಾರಣೆ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಕೆಲವು ವಿಷಯಗಳ ಬಗ್ಗೆ ಮಾತನಾಡಲು ತನಗೆ ಎರಡು ಗಂಟೆ ಬೇಕಾಗಬಹುದು ಎಂದು ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News