×
Ad

7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

Update: 2017-03-22 18:10 IST

ಶಿವಮೊಗ್ಗ, ಮಾ. 22: ವಿಷ ಸೇವಿಸಿ 7 ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪದ ಕಟ್ಟೆಹಕ್ಲು ಗ್ರಾಮದಲ್ಲಿ ವರದಿಯಾಗಿದೆ.

ಆನೆಗದ್ದೆ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದ ಪ್ರತಾಪ್ (12) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮನೆಯಲ್ಲಿಯೇ ವಿಷ ಸೇವಿಸಿದ್ದ ಈತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News