ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅರಿವು ಕಾರ್ಯಕ್ರಮ

Update: 2017-03-22 13:50 GMT

ಉಡುಪಿ, ಮಾ.22: ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತಂತೆ ಅರಿವು ಮೂಡಿಸುವ ಕಾರ್ಯಕ್ರಮ ಇತ್ತೀಚೆಗೆ ಕುಂಭಾಶಿ ಕೊರಗ ಕಾಲನಿಯಲ್ಲಿ ನಡೆಯಿತು.

ಕುಂಭಾಶಿ ಗ್ರಾಪಂ ಅಧ್ಯಕ್ಷೆ ವಾಣಿ ಅಡಿಗ ಅವರು ತಮಟೆ ಬಾರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲೆಯ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ್ ವಹಿಸಿದ್ದು, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯ ಬಗ್ಗೆ ಹಾಗೂ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿಯ ಸೌಲ್ಯಗಳ ಬಗ್ಗೆ ಮಾಹಿತಿ ನೀಡಿದರು.

ಅತಿಥಿಗಳಾಗಿ ಕುಂಭಾಶಿ ಗ್ರಾಪಂ ಉಪಾಧ್ಯಕ್ಷ ಮಹಾಬಲೇಶ್ವರ ಆಚಾರ್, ಕೋಟೇಶ್ವರ ನಮ್ಮ ಕಲಾಕೇಂದ್ರದ ಅಧ್ಯಕ್ಷ ರಂಜಿತ್ ಕುಮಾರ್ ಶೆಟ್ಟಿ, ಗಣೇಶ್ ಕುಂಭಾಶಿ, ಕುಂದಾಪುರ ವೃತ್ತ ಕಾರ್ಮಿಕ ನಿರೀಕ್ಷಕ ಸತ್ಯನಾರಾಯಣ, ಉಡುಪಿ 2ನೇ ವೃತ್ತ ಕಾರ್ಮಿಕ ನಿರೀಕ್ಷಕ ಜೀವನ್ ಕುಮಾರ್ ಹೆಚ್, ಉಡುಪಿ 1ನೇ ವೃತ್ತ ಕಾರ್ಮಿಕ ನಿರೀಕ್ಷಕ ರಾವುಮೂರ್ತಿ ಎಸ್.ಎಸ್ ಉಪಸ್ಥಿತರಿದ್ದರು.

        ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕರಾದಪ್ರಭಾಕರ್ ಆಚಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬಳಿಕ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಅರಿವು ಮೂಡಿಸುವ ಬೀದಿನಾಟಕವನ್ನು ಪ್ರದರ್ಶಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News