ಕಸ್ತೂರಿ ರಂಗನ್ ವರದಿ ಜಾರಿಯಿಂದ ಹಾನಿ: ಸಿಪಿಎಂ

Update: 2017-03-22 15:02 GMT

ಮಂಗಳೂರು, ಮಾ.22: ಕೇಂದ್ರ ಸರಕಾರವು ಕಸ್ತೂರಿ ರಂಗನ್ ವರದಿಯನ್ನು ಜಾರಿ ಮಾಡಲು ಹೊರಟಿದೆ. ಇದರ ಹಲವಾರು ಅಂಶಗಳು ಜಿಲ್ಲೆಗೆ ಮಾರಕವಾಗಲಿದೆ. ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಗ್ರಾಮಗಳನ್ನು ಈ ವರದಿಯೊಳಗಡೆ ಅಳವಡಿಸಲಾಗಿದೆ. ಜನ ನಿಬಿಡ ಗ್ರಾಮಗಳನ್ನು ಈ ಯೋಜನೆಯಿಂದ ಹೊರಗಿಡಬೇಕೆಂದು ಒತ್ತಾಯಿಸಿ ಕೇಂದ್ರ ಸರಕಾರದ ವಿರುದ್ಧ ಹೋರಾಟ ಮಾಡಬೇಕು ಎಂದು ಸಿಪಿಎಂ ಕರೆ ನೀಡಿದೆ. ಇತ್ತೀಚೆಗೆ ಕೆ.ಆರ್.ಶ್ರೀಯಾನ್‌ರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಸಿಪಿಎಂ ಪಕ್ಷದ ಜಿಲ್ಲಾ ಸಮಿತಿಯು ಈ ನಿರ್ಣಯ ಕೈಗೊಂಡಿದೆ. ಈ ವರದಿ ಜಾರಿಯಾಗುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿಗೆ ಅವಕಾಶವಿರುವುದಿಲ್ಲ. ಹಾಗಾಗಿ ರಾಜ್ಯ ಸರಕಾರವು ಕೂಡಲೇ ಮಧ್ಯಪ್ರವೇಶ ಮಾಡಬೇಕು. ಜನತೆಯ ಬದುಕಿಗೆ ಮಾರಕವಾಗುವ ಯಾವುದೇ ಕ್ರಮವನ್ನು ಕೇಂದ್ರ ಸರಕಾರ ಕೈಗೊಳ್ಳಬಾರದು ಎಂದು ಸಭೆ ಒತ್ತಾಯಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News