ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪಿ ಸೆರೆ

Update: 2017-03-22 16:37 GMT

ಮಂಗಳೂರು, ಮಾ.22: ಪಾಸ್‌ಪೋರ್ಟ್ ಪಡೆಯಲು ನಕಲಿ ದಾಖಲೆ ನೀಡಿ ವಂಚನೆ ಬಯಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.

ಚೇಳಾರುಪದವು ನಿವಾಸಿ ಪುರಂದರ (20) ಬಂಧಿತ ಆರೋಪಿ. ಈತ ಕಳೆದ ವರ್ಷ ಪಾಸ್‌ಪೋರ್ಟ್‌ಗೆ ದಾಖಲೆ ಸಲ್ಲಿಸುವಾಗ ಎಸೆಸೆಲ್ಸಿಯ ನಕಲಿ ಅಂಕಪಟ್ಟಿ ಸಲ್ಲಿಸಿದ್ದ. ಪರಿಶೀಲನೆ ವೇಳೆ ಇದು ಬೆಳಕಿಗೆ ಬಂದಿದ್ದು, ಈತನ ವಿರುದ್ಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಪುರಂದರ ಬುಧವಾರ ತನ್ನ ಮನೆಯಲ್ಲಿರುವ ಬಗ್ಗೆ ಖಚಿತ ಪಡೆಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜುರಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News