ಅಕ್ರಮ ಮರ ಸಾಗಾಟ : ಇಬ್ಬರ ಬಂಧನ

Update: 2017-03-22 17:20 GMT

ಬಂಟ್ವಾಳ, ಮಾ. 22: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ಮತ್ತು ಇಬ್ಬರು ಆರೋಪಿಗಳನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಸ್ವರಾಜ್ ಮಝ್ದ ಲಾರಿಯಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ತುಂಬಿಸಕೊಂಡು ಬೆಳ್ತಂಗಡಿಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಖಚಿತ ಮಾಹಿಯ ಮೇರೆಗೆ ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು ಬಿಸಿರೋಡು ಸರ್ಕಲ್‌ನಲ್ಲಿ ಲಾರಿ ಮತ್ತು ಮರದ ದಿಮ್ಮಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ ಸುಮಾರು 5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಲಾರಿ ಚಾಲಕ ಬೆಳ್ತಂಗಡಿಯ ಅಬ್ದುಲ್ ಲತೀಫ್ ಮತ್ತು ಫರಂಗಿಪೇಟೆ ನಿವಾಸಿ ಅಬ್ದುಲ್ ಲತೀಫ್‌ರನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News