ಮಾ.25: ಮೀನುಗಾರಿಕಾ ಫೆಡರೇಶನ್‌ಗಳಿಗೆ ತರಬೇತಿ ಕಾರ್ಯಗಾರ

Update: 2017-03-22 17:47 GMT

ಮಂಗಳೂರು, ಮಾ.22: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ,ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಹಾಗೂ ದ.ಕ. ಜಿಲ್ಲಾ ಸಹಕಾರ ಯೂನಿಯನ್‌ನ ಸಂಯುಕ್ತ ಆಶ್ರಯದಲ್ಲಿ ಮೀನುಗಾರರ ಮಹಾಮಂಡಳದ ಆಡಳಿತ ಮಂಡಳಿ ಸದಸ್ಯರಿಗೆ, ಅಧಿಕಾರಿ -ಸಿಬ್ಬಂದಿ ವರ್ಗಕ್ಕೆ ಹಾಗೂ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ, ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಗಾರ ಮಾ. 25ರಂದು ಬೆಳಗ್ಗೆ 10ಕ್ಕೆ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ನ ಮಂಗಳೂರು ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News