ಉಡುಪಿ: 22 ಮಂದಿ ಗೈರು

Update: 2017-03-22 18:41 GMT

ಉಡುಪಿ, ಮಾ.22: ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ಹಿಂದಿ ಭಾಷಾ ಪರೀಕ್ಷೆಗೆ 22 ಮಂದಿ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದಿ ಪರೀಕ್ಷೆಗೆ ಜಿಲ್ಲೆಯಿಂದ ಒಟ್ಟು 4,080 ಮಂದಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಇವರಲ್ಲಿ 4,058 ಮಂದಿ ಪರೀಕ್ಷೆ ಬರೆದು 22 ಮಂದಿ ಗೈರುಹಾಜರಾಗಿದ್ದಾರೆ ಎಂದು ಡಿಡಿಪಿಯು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News