×
Ad

​ಮಗುವಿನ ಮೇಲೆ ಹುಚ್ಚುನಾಯಿ ದಾಳಿ

Update: 2017-03-24 20:42 IST

ಮಂಡ್ಯ, ಮಾ.24: ಹುಚ್ಚುನಾಯಿ ಕಚ್ಚಿ ಎರಡು ವರ್ಷದ ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ಪಟ್ಟಣದ ಸೋಮೇಗೌಡರ ಬೀದಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಹೇಮಂತ್ ಅವರ ಪುತ್ರ ಅನ್ವಿಶ್‌ಗೌಡ ಎಂಬವರ ಮೇಲೆ ನಾಯಿ ದಾಳಿ ನಡೆಸಿದ್ದು, ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು, ಮಕ್ಕಳ ಮೇಲೆ ದಾಳಿ ನಡೆಸುತ್ತಿವೆ. ನಾಯಿಗಳ ಹಾವಳಿ ತಪ್ಪಿಸಲು ಪುರಸಭೆ ಆಡಳತಿ ಮುಂದಾಗಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಲ್ಲೂ ಹಲವು ಬಾರಿ ನಾಯಿಗಳ ಹಾವಳಿ ಬಗ್ಗೆ ಗಮನ ಸೆಳೆಯಲಾಗಿದೆ. ಆದರೂ, ಎಚ್ಚೆತ್ತುಕೊಂಡಿಲ್ಲ. ಈಗಲಾದರೂ ಕ್ರಮವಹಿಸದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News