ಆಯುರ್ವೇದಿಕ್ ಜಾಹೀರಾತುಗಳಿಗೆ ಆಯುಷ್ ಕಡಿವಾಣ

Update: 2017-03-24 16:20 GMT

ಹೊಸದಿಲ್ಲಿ,ಮಾ.24: ಗ್ರಾಹಕರನ್ನು ತಪ್ಪುದಾರಿಗೆಳೆಯುವಂತಹ ಆಯುರ್ವೇದಿಕ್ ಔಷಧಿಗಳ ಜಾಹೀರಾತುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂ ಭಾರತೀಯ ಜಾಹೀರಾತು ಗುಣಮಟ್ಟ ಮಂಡಳಿಯ ಜೊತೆ ಒಪ್ಪಂದಕ್ಕೆ ಸಹಿಹಾಕಿರುವುದಾಗಿ ಕೇಂದ್ರ ಸರಕಾರ ಶುಕ್ರವಾರ ಲೋಕಸಭೆಯಲ್ಲಿ ಹೇಳಿದೆ.

   ಸದನದಲ್ಲಿ ಈ ಮಾಹಿತಿ ನೀಡಿದ ಆಯುರ್ವೇದ, ಯೋಗ ಹಾಗೂ ಪ್ರಕೃತಿಚಿಕಿತ್ಸೆ ಖಾತೆಯ ಸಹಾಯಕ ಸಚಿವ ಶ್ರೀಪಾದ್ ನಾಯಕ್ ಅವರು ತನ್ನ ಸಚಿವಾಲಯವು ಆಯುರ್ವೇದ ಔಷಧಿಗಳ ಸುರಕ್ಷಿತ ಬಳಕೆಯನ್ನು ಉತ್ತೇಜಿಸುತ್ತಿದೆ ಎಂದರು. ‘‘ ಮುದ್ರಣ ಹಾಗೂ ಟಿವಿ ಮಾಧ್ಯಮಗಳಲ್ಲಿ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವವರನ್ನು ಕೇಂದ್ರ ಹಾಗೂ ರಾಜ್ಯ ಸರಕಾರದ ಗಮನಕ್ಕೆ ತರಲು ಆಯುಷ್ ಸಚಿವಾಲಯವು ಭಾರತೀಯ ಜಾಹೀರಾತು ಗುಣಮಟ್ಟ ಮಂಡಳಿಯ ಜೊತೆ ತಿಳುವಳಿಕಾ ಒಪ್ಪಂದಕ್ಕೆ ಸಹಿಹಾಕಿದೆ’’ ಎಂದರು.

  ಫಾರ್ಮಸಿಗಳು, ಔಷಧಿ ಪರೀಕ್ಷಣಾ ಪ್ರಯೋಗಾಲಯಗಳನ್ನು ಬಲಪಡಿಸುವುದು ಸೇರಿದಂತೆ ಆಯುರ್ವೇದಿಕ್ ಔಷಧಿಗಳ ಗುಣಮಟ್ಟ ನಿಯಂತ್ರಣಕ್ಕಾಗಿ ಹಲವಾರು ಕ್ರಮಗಳನ್ನು ಆಯಷ್ ಸಚಿವಾಲಯ ಕೈಗೊಂಡಿರುವುದಾಗಿ ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News