×
Ad

​ದಿಲ್ಲಿ ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ; 1 ಸಾವು

Update: 2017-03-25 09:49 IST

ಹೊಸದಿಲ್ಲಿ, ಮಾ.25: ದಿಲ್ಲಿ  ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಕಟ್ಟಡದಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ದಿಲ್ಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿರುವ  ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಬೆಂಕಿ ದುರಂತ ಸಂಭವಿಸಿದ್ದು,  ಘಟನಾ ಸ್ಥಳಕ್ಕೆ 32 ಅಗ್ನಿಶಾಮಕ ದಳದ  ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರತವಾಗಿವೆ..
ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ.  ಬೆಂಕಿಯಿಂದ ಉಂಟಾದ ನಷ್ಟದ ಬಗ್ಗೆ ವಿವರ ಲಭ್ಯವಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News