ಅಂತಿಮ ಟೆಸ್ಟ್: ಆಸ್ಟ್ರೇಲಿಯ ಬ್ಯಾಟಿಂಗ್ 34/1 (7 ಓವರ್)
Update: 2017-03-25 10:13 IST
ಧರ್ಮಶಾಲಾ, ಮಾ.25: ಇಲ್ಲಿ ಆರಂಭಗೊಂಡ ಅಂತಿಮ ಕ್ರಿಕೆಟ್ ಟೆಸ್ಟ್‌ನಲ್ಲಿ ಟಾಸ್ ಜಯಿಸಿದ ಆಸ್ಟ್ರೇಲಿಯ ಬ್ಯಾಟಿಂಗ್ ಆಯ್ದುಕೊಂಡಿದ್ದು, 7 ಓವರ್ ಗಳ ಮುಕ್ತಾಯಕ್ಕೆ ಆಸ್ಟ್ರೇಲಿಯ 1 ವಿಕೆಟ್ ನಷ್ಟದಲ್ಲಿ 34ರನ್ ಗಳಿಸಿದೆ.
ಆರಂಭಿಕ ದಾಂಡಿಗ ರೆನ್‌ಶಾ(1) ಅವರು ಉಮೇಶ್ ಯಾದವ್ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದ್ದಾರೆ.
ಡೇವಿಡ್ ವಾರ್ನರ್ ಮತ್ತು ನಾಯಕ ಸ್ಟೀವ್ ಸ್ಮಿತ್ ಕ್ರೀಸ್ ನಲ್ಲಿ ಆಡುತ್ತಿದ್ದಾರೆ.
ಗಾಯಗೊಂಡಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಅವರ ಬದಲಿಗೆ ಉಪನಾಯಕ ಅಜಿಂಕ್ಯ ರಹಾನೆ ನಾಯಕರಾಗಿ ತಂಡವನ್ನು ಮುನ್ನೆಡೆಸುತ್ತಿದ್ದಾರೆ.