ಮಾ. 26ರಂದು ಕೃಷ್ಣಾಪುರದಲ್ಲಿ ಸಲಫಿ ಸಮಾವೇಶ
Update: 2017-03-25 17:11 IST
ಮಂಗಳೂರು, ಮಾ.25: ಸೌತ್ ಕರ್ನಾಟಕ ಸಲಫಿ ಮೂವ್‍ಮೆಂಟ್ ಹಮ್ಮಿಕೊಂಡಿರುವ ಕುರ್‍ಆನ್ ಸಂದೇಶ ಪ್ರಚಾರ ಅಭಿಯಾನದ ಅಂಗವಾಗಿ ಎಸ್.ಕೆ.ಎಸ್.ಎಮ್.ನ ಚೊಕ್ಕಬೆಟ್ಟು ಘಟಕದ ವತಿಯಿಂದ ಮಾ. 26 ರಂದು ಸಂಜೆ 5 ಗಂಟೆಗೆ ಕೃಷ್ಣಾಪುರ ಜಂಕ್ಷನ್‍ನಲ್ಲಿ ಸಲಫಿ ಸಮಾವೇಶವು ಜರಗಲಿದೆ.
ಈ ಸಮಾವೇಶದಲ್ಲಿ ಹಿರಿಯ ವಿದ್ವಾಂಸ ಚುಯೈಲಿ ಅಬ್ದುಲ್ಲಾಹ್ ಮುಸ್ಲಿಯಾರ್ ಮತ್ತು ಮೌಲವಿ ಅಲಿ ಉಮರ್ ಉಪನ್ಯಾಸ ನೀಡಲಿದ್ದಾರೆ. ಎಸ್.ಕೆ.ಎಸ್.ಎಮ್. ಕೇಂದ್ರ ಸಮಿತಿ ಅಧ್ಯಕ್ಷ ಯು.ಎನ್. ಅಬ್ದುಲ್ ರಝಾಕ್‍ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಪ್ರಕಟನೆ ತಿಳಿಸಿದೆ