×
Ad

ದಾವಣಗೆರೆಯಲ್ಲಿ ಬ್ರಿಗೇಡ್ ಸಮಾವೇಶ: ಕೆ.ಎಸ್.ಈಶ್ವರಪ್ಪ

Update: 2017-03-25 18:06 IST

ಶಿವಮೊಗ್ಗ, ಮಾ. 25: ದಾವಣಗೆರೆಯಲ್ಲಿ ಏಪ್ರಿಲ್ 8 ರಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಜಿಲ್ಲಾ ಮಟ್ಟದ ಸಮಾವೇಶ ನಡೆಯಲಿದೆ. ಇದೇ ವೇಳೆ ಬ್ರಿಗೇಡ್‌ನ ಮಹಿಳಾ ಹಾಗೂ ಯುವ ಘಟಕಗಳಿಗೆ ಚಾಲನೆ ನೀಡಲಾಗುವುದುಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಹೋರಾಟಕ್ಕೆ ಕಂಕಣಬದ್ಧವಾಗಿರುವ ರಾಯಣ್ಣ ಬ್ರಿಗೇಡ್, ರಾಜ್ಯದ ಶೈಕ್ಷಣಿಕ ಪ್ರಗತಿಗಾಗಿ ಉತ್ತೇಜನ ನೀಡಲು ಸಂಕಲ್ಪ ಮಾಡಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ 5013 ಜೂನಿಯರ್ ಕಾಲೇಜ್‌ನಲ್ಲಿ ಅತಿ ಹೆಚ್ಚು ಅಂಕ ಪಡೆದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ 2500 ರೂ. ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ ಎಂದರು.

ರಾಜ್ಯದ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡಲು ಈ ಹೆಜ್ಜೆ ಇಡಲಾಗಿದೆ. ಇದರಿಂದಾಗಿ, ಸುಮಾರು 10 ಸಾವಿರ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ. ಮೇ ನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News