×
Ad

"ಜನಪರ ಜನಪ್ರಿಯ ಬಜೆಟ್" ಪ್ರಚಾರ ವಾಹನಕ್ಕೆ ಸಚಿವರಿಂದ ಚಾಲನೆ

Update: 2017-03-25 20:34 IST

ಉಡುಪಿ, ಮಾ.25: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಸರಕಾರದ 2017-18ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಪ್ರಮುಖ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ಮಾಹಿತಿ ನೀಡಲು ರೂಪಿಸಿರುವ 'ಜನಪರ ಜನಪ್ರಿಯ ಬಜೆಟ್‌' ಪ್ರಚಾರ ವಾಹನಕ್ಕೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಶನಿವಾರ ಮಣಿಪಾಲ ದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ರಾಜ್ಯ ಸರಕಾರವು ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಅಕ್ಕಿ, ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ವಾರದಲ್ಲಿ ಐದು ದಿನ ಹಾಲು ಪೂರೈಕೆ, ರೈತ ಕುಟುಂಬಗಳಿಗೆ ಕೃಷಿ ಭಾಗ್ಯ ವಿಸ್ತರಣೆ ಸೇರಿದಂತೆ ಅನೇಕ ನೂತನ ಯೋಜನೆಗಳನ್ನು ಈ ವರ್ಷದ ಬಜೆಟ್‌ನಲ್ಲಿ ಘೋಷಿಸಿದ್ದು, ಈ ಯೋಜನೆಗಳ ಮಾಹಿತಿ ಹಾಗೂ ಕಿರುಹೊತಿತಿಗೆ ಜನಸಾಮಾನ್ಯರಿಗೆ ಮತುತಿ ಪಲಾನುವಿಗಳಿಗೆ ತಲುಪುವಂತೆ ಇಲಾಖೆ ಕಾರ್ಯಕ್ರಮ ರೂಪಿಸಿದೆ.

ಜನಪರ ಜನಪ್ರಿಯ ಬಜೆಟ್ ಪ್ರಚಾರ ವಾಹನವು 20 ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಿದೆ.

 ಈ ಸಂದರ್ಭ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಪೌರಾಯುಕ್ತ ಡಿ.ಮಂಜುನಾಥಯ್ಯ, ತಹಶೀಲ್ದಾರ್ ಮಹೇಶ್ಚಂದ್ರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ವಾರ್ತಾಧಿಕಾರಿ ಕೆ.ರೋಹಿಣಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News