ವಾರಾಹಿ ನಾಲೆ ಒಡೆದ ಬಗ್ಗೆ ತನಿಖೆ: ಸಚಿವ ಪ್ರಮೋದ್
ಉಡುಪಿ, ಮಾ.25: ವಾರಾಹಿ ನಾಲೆ ಒಡೆಯುತ್ತಿರುವ ಕುರಿತು ಕಾಮ ಗಾರಿಯ ಗುಟಮಟ್ಟ, ಸಾಧಕ ಬಾಧಕಗಳ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಹಾಗೂ ನಿಗಮದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು. ಸರಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ನಾಲೆ ಒಡೆಯುವ ಕೃತ್ಯ ಎಸಗಲಾಗುತ್ತಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು. ಇದರ ಹಿಂದೆ ರಾಜಕೀಯ ಷಡ್ಯಂತ್ರ ಕೂಡ ಇರಬಹುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಜನರಿಗೆ ನೀರಿನ ಸಮಸ್ಯೆಯಾಗದ ರೀತಿಯಲ್ಲಿ ನೋಡಿ ಕೊಳ್ಳುವಂತೆ ಈಗಾಗಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಈ ವಿಚಾರದಲ್ಲಿ ಲೋಪ ಗಳಾಗದೆ ಸಂಬಂಧಪಟ್ಟ ಗ್ರಾಪಂ ಗಳ ಪಿಡಿಓಗಳ ವಿರುದ್ಧ ಕಠಿಣ ಕ್ರಮ ತೆಗೆದು ಕೊಳ್ಳಲಾಗುವುದು ಎಂದರು.
ನೀರಿನ ಸಮಸ್ಯೆ ಉಲ್ಬಣಗೊಂಡರೆ ಟ್ಯಾಂಕರ್ ಮೂಲಕ ನೀರು ಸರಬ ರಾಜು ಮಾಡುವಂತೆ ತಿಳಿಸಲಾಗಿದೆ. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸದಿದ್ದರೆ ಅವರನ್ನು ಅಮಾನತು ಮಾಡಲು ನಾವು ಹಿಂಜರಿಯುವುದಿಲ್ಲ ಎಂದು ಅವರು ಹೇಳಿದರು.
ಮಳೆ ಬರುವಂತೆ ದೇವರ ಮೊರೆ ಹೋಗಲು ನಿರ್ಧರಿಸಲಾಗಿದೆ. ನಗರ ಸಭೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಕೊಳವೆ ಬಾವಿ ಹಾಗೂ ಬಾವಿಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದ ಸಚಿವರು, ನೀರಿನ ಸಮಸ್ಯೆ ಪರಿಹಾರಕ್ಕೆ ಯಾವುದೇ ಹಣಕಾಸಿನ ಕೊರತೆ ಇಲ್ಲ. ಈಗಾ ಗಲೇ ತಹಶೀಲ್ದಾರ್‌ರ ಖಾತೆಗೆ 35 ಲಕ್ಷ ರೂ. ಹಣವನ್ನು ಜಮಾ ಮಾಡ ಲಾಗಿದೆ ಎಂದರು.