ಕದ್ರಿ ದೇವಳದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ
Update: 2017-03-26 09:47 IST
ಮಂಗಳೂರು, ಮಾ.26: ಮುಜರಾಯಿ ಇಲಾಖೆಯ ಸೂಚನೆಯಂತೆ ಮುಜರಾಯಿ ಇಲಾಖೆಗೆ ಒಳಪಟ್ಟ ಕದ್ರಿ ಶ್ರೀ ಮಂಜುನಾಥ ದೇವಳದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಇಂದು ಬೆಳಗ್ಗೆ ಚಾಲನೆ ನೀಡಲಾಯಿತು.
ಶಾಸಕ ಜೆ.ಆರ್.ಲೋಬೊ ಅಭಿಯಾನಕ್ಕೆ ಚಾಲನೆ ನೀಡಿದರು. ದ.ಕ. ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್, ಮಾಜಿ ಮೇಯರ್ ಹರಿನಾಥ್, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದು, ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದರು.
ರಾಜ್ಯದ ಮುಜರಾಯಿ ಇಲಾಖೆಗೆ ಒಳಪಟ್ಟ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅದರಂತೆ ಇಂದು ದ.ಕ. ಜಿಲ್ಲೆಯ ಎಲ್ಲಾ ಮುಜರಾಯಿಗೆ ಒಳಪಟ್ಟ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೇವಾಲಯದ ಪರಿಸರ, ಒಳ ಹಾಗೂ ಹೊರಾಂಗಣ ಸ್ವಚ್ಚಗೊಳಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಮುಜರಾಯಿ ಇಲಾಖೆ ಸೂಚಿಸಿದೆ.