ಸಿಎಂ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ವೀಡಿಯೊ: ಆರೋಪಿಯ ಸೆರೆ
Update: 2017-03-26 11:42 IST
ತುಮಕೂರು, ಮಾ.26: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಸೆಲ್ಫಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದ ಆರೋಪಿಯನ್ನು ತುಮಕೂರು ಪೋಲಿಸರು ಬಂಧಿಸಿದ್ದಾರೆ.
ತುಮಕೂರು ನಗರದ ಭೀಮಸಂದ್ರದ ನಾಗರಾಜ್ ಬಂಧಿತ ಆರೋಪಿ. ಈತ ಕೆಲವು ದಿವಸಗಳ ಹಿಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯವಾಗಿ ನಿಂದಿಸಿ, ಸೆಲ್ಫಿ ವೀಡಿಯೊ ಮಾಡಿ, ಅದನ್ನು ವಾಟ್ಸ್‌ಆ್ಯಪ್ ಹಾಗೂ ಫೇಸ್‌ಬುಕ್‌ಗೆ ಅಪ್‌ಲೋಡ್ ಮಾಡಿದ್ದನೆನ್ನಲಾಗಿದೆ. ಈ ಬಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆದರೆ ಈ ಘಟನೆ ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಪ್ರಕರಣವನ್ನು ತುಮಕೂರು ನಗರ ಠಾಣೆಗೆ ವರ್ಗಾಯಿಸಲಾಗಿತ್ತು.