ಟೆಂಪೊ ಢಿಕ್ಕಿ: ರಿಕ್ಷಾ ಚಾಲಕ ಮೃತ್ಯು
ಕುಂದಾಪುರ, ಮಾ.26: ದೇವಲ್ಕುಂದ ಗ್ರಾಮದ ಬಾಳಿಕೇರಿ ಬಸ್ ನಿಲ್ದಾಣದ ಬಳಿ ಇಂದು ಬೆಳಗ್ಗೆ 10ಗಂಟೆ ಸುಮಾರಿಗೆ ಟೆಂಪೊವೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟು ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಮೃತರನ್ನು ರಿಕ್ಷಾ ಚಾಲಕ, ಕೆಂಚನೂರು ಗ್ರಾಮದ ನೆಂಪು ಪಡೂರು ನಿವಾಸಿ, ನಿತಿನ್(23) ಎಂದು ಗುರುತಿಸಲಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸು ತ್ತಿದ್ದ ಕರ್ಕುಂಜೆ ಮುರುಕೈಯ ಸುಬ್ಬ ದೇವಾಡಿಗ, ವನಿತಾ, ನಾಗರತ್ನಾ ಎಂಬವರು ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದಾರೆ.
ಹೆಮ್ಮಾಡಿ ಕಡೆಯಿಂದ ನೆಂಪು ಕಡೆಗೆ ಹೋಗುತ್ತಿದ್ದ ಟೆಂಪೊ ಎದುರುಗಡೆ ಯಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಇದರ ಪರಿಣಾಮ ರಿಕ್ಷಾ ರಸ್ತೆಯಲ್ಲಿ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ನಿತಿನ್‌ನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿತಿನ್ ಮೃತಪಟ್ಟರು.
ನಿತಿನ್ ತಂದೆ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು, 7ವರ್ಷಗಳ ಹಿಂದೆ ಓರ್ವ ಸಹೋದರ ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮೃತ ಪಟ್ಟಿದ್ದನು. ನಿತಿನ್ ತಾಯಿ, ಓರ್ವ ಸಹೋದರ, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಅಪಘಾತ ನಡೆಸಿದ ಟೆಂಪೋ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.