ಭಾಷಾ ಶಿಕ್ಷಣಕ್ಕೆ ಪ್ರಾಧಾನ್ಯ ಅಗತ್ಯ: ಡಾ.ಆಳ್ವ

Update: 2017-03-26 18:29 GMT

ಬಂಟ್ವಾಳ, ಮಾ.26: ಕನ್ನಡ ಭಾಷೆಯು ಶಿಕ್ಷಣದ ಮೂಲಕ ರಾಜ್ಯದ ಮಾತೃ ಭಾಷೆ ಮತ್ತು ಸಾಹಿತ್ಯ ಹಾಗೂ ಇಲ್ಲಿನ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಸಹಕಾರಿಯಾಗಿದೆ. ಇದರಿಂದಾಗಿ ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ಪ್ರತಿಯೊಬ್ಬರು ಕೂಡಾ ಜವಾಬ್ದಾರಿಯುತವಾಗಿ ತೊಡಗಿಸಿಕೊಂಡು ರಾಜ್ಯದ ಋಣ ತೀರಿಸಿಕೊಳ್ಳಲು ಪ್ರಾಧಾನ್ಯತೆ ನೀಡಬೇಕು ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದ್ದಾರೆ. ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್‌ನ ವತಿಯಿಂದ ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ತಾಲೂಕು ಮಟ್ಟದ 17ನೆ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

 ಸಮ್ಮೇಳನಾಧ್ಯಕ್ಷ ಡಾ.ಪುಂಡಿಕಾಯಿ ಗಣಪಯ್ಯ ಭಟ್ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನಗಳು ನಿರಂತರವಾಗಿ ನಡೆಯಬೇಕು. ಆ ಮೂಲಕ ನಮ್ಮ ಮೇಲಿನ ಜವಾಬ್ದಾರಿಯೂ ಹೆಚ್ಚುತ್ತದೆ ಎಂದರು.

 ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಅಧ್ಯಯನ ಸಂಸ್ಥೆಯ ಡಾ.ಧನಂಜಯ ಕುಂಬ್ಳೆ ಸಮಾರೋಪ ಭಾಷಣ ಮಾಡಿದರು. ಅಳಿಕೆ ಸತ್ಯಸಾಯಿ ಲೋಕಸೇವಾ ಟ್ರಸ್ಟ್ಟ್‌ನ ಅಧ್ಯಕ್ಷ ಯು.ಗಂಗಾಧರ ಭಟ್, ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ನಂದಾವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಸಿ. ಭಂಡಾರಿ ಮತ್ತಿತರರು ಶುಭ ಹಾರೈಸಿದರು. ಸ್ವಾಗತ ಸಮಿತಿಯ ಅಧ್ಯಕ್ಷ ಪ್ರಭಾಕರ ಪ್ರಭು, ಕೋಶಾಧಿಕಾರಿ ಡಾ.ಸುದೀಪ್ ಕುಮಾರ್ ಮತ್ತಿತರರು ಇದ್ದರು.

ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಅರ್ಕಕೀರ್ತಿ ಇಂದ್ರ ಶುಭಾಶಂಸನೆ ಮಾಡಿದರು. ಬಂಟ್ವಾಳ ಕಸಾಪ ಅಧ್ಯಕ್ಷ ಕೆ.ಮೋಹನ್ ರಾವ್ ಸ್ವಾಗತಿಸಿ, ಸಮಿತಿಯ ಪ್ರಧಾನ ಕಾರ್ಯದರ್ಶಿ ರಮಾನಂದ ವಂದಿಸಿದರು. ಡಾ. ನಾಗವೇಣಿ ಮಂಚಿ ಮತ್ತು ಮಹೇಶ್ ಕುಮಾರ್ ವಿ. ಕರ್ಕೇರ ನಿರೂಪಿಸಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News