×
Ad

ಮೇರಮಜಲು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Update: 2017-03-27 13:41 IST

ಬಂಟ್ವಾಳ, ಮಾ.27: ತಾಲೂಕಿನ ಮೇರಮಜಲು ಗ್ರಾಮದ ಬದ್ರಿಯಾ ನಗರದ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ.

ಬದ್ರಿಯಾ ನಗರದ ಮೊಬೈಲ್ ಟವರ್ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಮೃತದೇಹ ಕಂಡು ಬಂದಿದ್ದು, ಸುಮಾರು ಒಂದು ತಿಂಗಳ ಹಿಂದೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಕೊಲೆ ನಡೆದಿರುವ ಬಗ್ಗೆಯೂ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News