ಎ.1ಕ್ಕೆ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್
Update: 2017-03-27 19:35 IST
ಬೆಂಗಳೂರು, ಮಾ. 27: ಭೀಕರ ಸ್ವರೂಪದ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ಜನರಿಗೆ ರಾಜ್ಯ ಸರಕಾರ ಎ.1ರಿಂದ ವಿದ್ಯುತ್ ದರ ಏರಿಕೆ ಸಿದ್ಧತೆ ನಡೆಸಿದ್ದು, ಯುಗಾದಿ ಹಬ್ಬಕ್ಕೆ ರಾಜ್ಯದ ಜನರಿಗೆ ವಿದ್ಯುತ್ ಶಾಕ್ ಕಾದಿದೆ.
ಪ್ರತಿ ಯೂನಿಟ್‌ಗೆ 1.20ರೂ. ಏರಿಸುವಂತೆ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪೆನಿಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿದ್ದವು. ಈ ಸಂಬಂಧ ಕೆಇಆರ್‌ಟಿ ಜಾಹೀರಾತು ನೀಡಿ ಸಾರ್ವಜನಿಕರಿಂದ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಿತ್ತು.
ಇದೀಗ ಆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿರುವ ಕೆಇಆರ್‌ಸಿ ವಿದ್ಯುತ್ ದರ ಏರಿಕೆಗೆ ಸಿದ್ದತೆ ನಡೆಸಿದೆ. ಬರ ಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರಕಾರ ವಿದ್ಯುತ್ ಖರೀದಿಗೆ ಹೆಚ್ಚಿನ ಹಣವನ್ನು ವೆಚ್ಚ ಮಾಡುತ್ತಿದೆ. ಹೀಗಾಗಿ ದರ ಏರಿಕೆ ಅನಿವಾರ್ಯ ಎಂದು ಇಲಾಖೆಯ ಮೂಲಗಳು ತಿಳಿಸಿವೆ.