ಎ.1: ಎಸ್ಸಿ/ಎಸ್ಟಿ ಮುಖಂಡರ ಸಭೆ: ಅಹವಾಲು ಸ್ವೀಕಾರ
Update: 2017-03-28 00:01 IST
ಮಂಗಳೂರು, ಮಾ.27: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ-ಪಂಗಡ ಮುಖಂಡರ ಸಭೆ ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಎಪ್ರಿಲ್ 1ರಂದು ಜಿಲ್ಲಾಕಾರಿ ಕಚೇರಿಯಲ್ಲಿ ನಡೆಯಲಿದೆ.
ಸಭೆಯಲ್ಲಿ ಚರ್ಚಿಸಲಾಗುವ ವಿಷಯಗಳ ಬಗ್ಗೆ ಅಹವಾಲು ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯಲ್ಲಿ ಸ್ವೀಕರಿಸಲಾಗುವುದು. ಅರ್ಜಿಗಳನ್ನು ಮಾ.30ರಂದು ಸಂಜೆ 5ರೊಳಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸುವಂತೆ ಪ್ರಕಟನೆ ತಿಳಿಸಿದೆ.