ಕಾಸರಗೋಡು: ಅಣೆಕಟ್ಟು ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು
Update: 2017-03-28 09:35 IST
ಕಾಸರಗೋಡು, ಮಾ.28: ಅಣೆಕಟ್ಟಿನ ನೀರಿನಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಪಾಣತ್ತೂರಿನಲ್ಲಿ ನಡೆದಿದೆ.
ಮೃತಪಟ್ಟವನನ್ನು ಪಾಣತ್ತೂರು ಚೀರಕಡವಿನ ಡೋಮಿನಿಕ್ ಆಂಟನಿ (18) ಎಂದು ಗುರುತಿಸಲಾಗಿದೆ. ಸಂಜೆ 7 ಗಂಟೆ ಸುಮಾರಿಗೆ ಸ್ನೇಹಿತರ ಜೊತೆ ಚೀರಕಡವಿನ ಅಣೆಕಟ್ಟು ತುಂಬಿದ್ದ ನೀರಿನಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಜೊತೆಗಿದ್ದವರ ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದು ಆತನನ್ನು ಮೇಲಕ್ಕೆತ್ತಿ ಕಾಞ೦ಗಾಡ್ ಆಸ್ಪತ್ರೆಗೆ ದಾಖಲಿಸಿದರೂ ತಡರಾತ್ರಿ ಮೃತಪಟ್ಟಿದ್ದಾನೆ. ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.