×
Ad

ಉ.ಪ್ರದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಮತಾ ಬ್ಯಾನರ್ಜಿ ಕಳವಳ

Update: 2017-03-28 13:56 IST

ಕೋಲ್ಕತಾ,ಮಾ.28: ಉತ್ತರ ಪ್ರದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಂಗಳವಾರ ಇಲ್ಲಿ ಕಳವಳ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಸರಕಾರವು ಎಲ್ಲರಿಗಾಗಿ ಕೆಲಸ ಮಾಡಬೇಕು ಮತ್ತು ‘ಸಬ್ ಕಾ ಸಾಥ್,ಸಬ್ ಕಾ ವಿಕಾಸ್’ ಎಂಬ ಘೋಷಣೆ ಅಕ್ಷರಶಃ ಜಾರಿಗೊಳ್ಳಬೇಕು ಎಂದು ಹೇಳಿದರು.

ಉ.ಪ್ರದೇಶದಲ್ಲಿಯ ಇತ್ತೀಚಿನ ಬೆಳವಣಿಗೆಗಳು ನಮಗೆ ಕಳವಳವನ್ನುಂಟು ಮಾಡಿವೆ. ಜನರು ಭೀತರಾಗಿದ್ದಾರೆ ಮತ್ತು ಜಾತಿ,ಜನಾಂಗ ಹಾಗು ಧರ್ಮದ ಕುರಿತಂತೆ ಅಸಮಾಧಾನಗಳು ಹೆಚ್ಚಿನವರಲ್ಲಿ ಆತಂಕ ಸೃಷ್ಟಿಸಿವೆ. ನಾವೆಲ್ಲ ಒಂದೇ. ‘ಸಬ್ ಕಾ ಸಾಥ್,ಸಬ್ ಕಾ ವಿಕಾಸ್’ ಎನ್ನುವುದು ಕೇವಲ ಹೇಳಿಕೆಯಾಗುಳಿಯಬಾರದು,ಅದನ್ನು ಕಾರ್ಯಗತಗೊಳಿಸಬೇಕಾಗಿದೆ. ಆಗಲೇ ಅದು ಅರ್ಥಪೂರ್ಣವಾಗುತ್ತದೆ. ನಾವು ನಮ್ಮ ಸಂವಿಧಾನವನ್ನು ರಕ್ಷಿಸಬೇಕಾಗಿದೆ ಮತ್ತು ನಮಗೆ ಮಾರ್ಗದರ್ಶಕನಾಗಿರಲು ಅದಕ್ಕೆ ಅವಕಾಶ ನೀಡಬೇಕಿದೆ ಎಂದು ಹೇಳಿಕೆಯೊಂದರಲ್ಲಿ ಅವರು ತಿಳಿಸಿದರು.

ಅಕ್ರಮ ಮತ್ತು ಯಾಂತ್ರೀಕೃತ ಕಸಾಯಿಖಾನೆಗಳ ವಿರುದ್ಧ ರಾಜ್ಯಾದ್ಯಂತ ನಡೆಯು ತ್ತಿರುವ ಕಾರ್ಯಾಚರಣೆಯನ್ನು ಪ್ರತಿಭಟಿಸಿ ಮಾಂಸ ವ್ಯಾಪಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ಮಮತಾರ ಈ ಹೇಳಿಕೆ ಹೊರಬಿದ್ದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News