×
Ad

ಆಳ್ವಾಸ್ ಎಂಬಿಎ ವಿಭಾಗದಿಂದ ಏಗಾನ್-17 ಮ್ಯಾನೇಜ್‌ಮೆಂಟ್ ಫೆಸ್ಟ್

Update: 2017-03-29 00:06 IST

ಮೂಡುಬಿದಿರೆ, ಮಾ.28: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಆಶ್ರಯದಲ್ಲಿ ಮಾ.31ರಂದು ರಾಷ್ಟ್ರಮಟ್ಟದ ಏಗಾನ್-2017 ಮ್ಯಾನೇಜ್‌ಮೆಂಟ್ ಫೆಸ್ಟ್ ಕಾಲೇಜಿನ ಎಂಬಿಎ ಸೆಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಎಂಬಿಎ ವಿಭಾಗದ ಡೀನ್ ಪ್ರೊ.ಪಿ.ರಾಮಕೃಷ್ಣ ಚಡಗ ಹೇಳಿದ್ದಾರೆ.

ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿಸಿ ನೀಡಿದರು.

ಅಂದು ಬೆಳಗ್ಗೆ 9:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಅಲಂಗಾರಿನ ಪಂಡಿತ್ ರೆಸಾರ್ಟ್‌ನ ಮಾಲಕ ಲಾಲ್ ಗೋಯೆಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ರೇಜ್ ಕ್ರಷರ್ಸ್, ಸಿ.ಕಾ.ಫಂಡಾ, ಕ್ಲಿಂಚ್ ಡೀಲ್ಸ್, ಕಾರ್ಪ್ ಜಾಕ್, ಕಾರ್ಪೊರೇಟ್ ರೋಡೀಸ್ ಎಂಬ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ರಾಷ್ಟ್ರದ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳು ಆಯಾ ಕಾಲೇಜುಗಳನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾರೆ. ಎಂಬಿಎ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಕಲಿಕಾ ಸಾಮರ್ಥ್ಯವನ್ನು ಅಧಿಕಗೊಳಿಸಲು ಇದೊಂದು ಅವಕಾಶವಾಗಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಂಬಿಎ ವಿಭಾಗದ ಪ್ರಾಚಾರ್ಯ ನಾಗೇಂದ್ರ ಹಾಗೂ ವಿಶ್ವನಾಥ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News