×
Ad

ಎ.2ಕ್ಕೆ ಪೊಲೀಸ್ ಧ್ವಜ ದಿನಾಚರಣೆ

Update: 2017-03-29 11:08 IST

ಬೆಂಗಳೂರು, ಮಾ.29: ರಾಜ್ಯದ ಎಲ್ಲ ಪೊಲೀಸ್ ಘಟಕಗಳಲ್ಲಿ ಎ.2ರಂದು ಪೊಲೀಸ್ ಧ್ವಜ ದಿನಾಚರಣೆ ನಡೆಯಲಿದೆ.

1965 ಏಪ್ರಿಲ್ 2ರಂದು ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ ಜಾರಿಗೆ ಬಂದಿದ್ದು, ಈ ದಿನವನ್ನು ಪೊಲೀಸ್ ಧ್ವಜ ದಿನಾಚರಣೆಯನ್ನಾಗಿ ಆಚರಿಸಿ ಪೊಲೀಸ್ ಸೇವೆಯಲ್ಲಿ ಇರುವವರೆಲ್ಲರೂ ತಮ್ಮನ್ನು ಸೇವೆಗೆ ಪುನರ್ ಸಮರ್ಪಿಸಿಕೊಳ್ಳುವುದಲ್ಲದೇ, ಈ ದಿನವನ್ನು ‘ಪೊಲೀಸ್ ಕಲ್ಯಾಣ ದಿನ’ವನ್ನಾಗಿ ಕೂಡ ಆಚರಿಸಲಾಗುತ್ತಿದೆ.

ಎ.2ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಕೋರಮಂಗಲದ ಕೆಎಸ್‌ಆರ್‌ಪಿ ಪೆರೇಡ್ ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News