ಕಾಸರಗೋಡು: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ
Update: 2017-03-29 12:02 IST
ಕಾಸರಗೋಡು, ಮಾ.29: ಹಲವು ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗಿ ತಲೆಮರೆಸಿಕೊಂಡಿದ್ದ ಒಂಭತ್ತು ಮಂದಿ ಸೇರಿದಂತೆ 26 ವಾರಂಟ್ ಆರೋಪಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ ಸಿಮೋನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶಾಂತಿ ಕಾಪಾಡಲು, ಸಮಾಜ ದ್ರೋಹಿಗಳ ವಿರುದ್ಧ ಪೊಲೀಸರು ಕ್ರಮ ಆರಂಭಿಸಿದ್ದು, ಎರಡು ದಿನಗಳ ಅವಧಿಯಲ್ಲಿ ಹಲವು ಮಂದಿಯನ್ನು ಬಂಧಿಸಲಾಗಿದೆ.
ಜಿಲ್ಲೆಯ ಹಲವೆಡೆಗಳಲ್ಲಿ ನಡೆದ ಕಾರ್ಯಾಚರಣೆಯಿಂದ ಆರೋಪಿಗಳನ್ನು ಬಂಧಿಸಲಾಗಿದ್ದು, ಸಂಶಯಾಸ್ಪದವಾಗಿ ಕಂಡು ಬಂದ 35 ಮಂದಿಯನ್ನು ಬಂಧಿಸಲಾಗಿದೆ.
ಮೋಟಾರು ವಾಹನ ಕಾಯ್ದೆಯಡಿ 670 ಮಂದಿ ವಿರುದ್ಧ ದಂಡ ವಿಧಿಸಲಾಗಿದೆ. ಸೂಕ್ತ ದಾಖಲೆಗಳಿಲ್ಲದೆ ಚಾಲಾಯಿಸುತ್ತಿದ್ದ 151 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ