ವಿದೇಶದಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಣೆ: ಓರ್ವನ ಬಂಧನ

Update: 2017-03-29 12:35 GMT

ಬೆಂಗಳೂರು, ಮಾ.29: ವಿದೇಶದಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಕೇಂದ್ರ ಮಾದಕ ವಸ್ತು ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಾಜಾ ಯಾನೆ ಮುಸ್ತಫಾ(31) ಎಂದು ಗುರುತಿಸಲಾಗಿದೆ. ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೇಂದ್ರ ಮಾದಕ ವಸ್ತು ನಿಗ್ರಹ ದಳ ಕಾರ್ಯಾಚರಣೆ ನಡೆಸಿದ ವೇಳೆ ಆರೋಪಿ ರಾಜಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ 11.8 ಕೆಜಿ ಮಾದಕ ವಸ್ತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ಮಲೇಶ್ಯಾದಿಂದ ಬೆಂಗಳೂರಿಗೆ ಮಾದಕವಸ್ತು ಸಾಗಿಸುತ್ತಿದ್ದ ಎನ್ನಲಾಗಿದ್ದು, ಬಟ್ಟೆಯಲ್ಲಿ ಸುತ್ತಿದ ಬಾಕ್ಸ್‌ನಲ್ಲಿ ಡ್ರಗ್ಸ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News