ಗ್ರಾಹಕ ರಕ್ಷಣೆ ಅರಿವು ಕಾರ್ಯಕ್ರಮ
Update: 2017-03-30 18:25 IST
ಮಂಗಳೂರು, ಮಾ. 30: ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ‘ಸಹಯೋಗ ಫೋರಂ’ ಹಾಗೂ ಸಂತ ಅಲೋಶಿಯಸ್‌ನ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಮಾಧ್ಯಮ ವಿಭಾಗದ ಸಹಭಾಗಿತ್ವದಲ್ಲಿ ಮಾ. 31ರಂದು ಬೆಳಗ್ಗೆ 11:45ಕ್ಕೆ ಗ್ರಾಹಕ ರಕ್ಷಣಾ ಕಾಯ್ದೆಯ ಬಗ್ಗೆ ಅರಿವು ಕಾರ್ಯಕ್ರಮವನ್ನು ರೋಶನಿ ನಿಲಯದ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಉದ್ಘಾಟಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಕಿಶೋರ್ ಡಿಸಿಲ್ವ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಜೆ.ಸಾಲಿಯಾನ್ ಭಾಗವಹಿಸಲಿದ್ದು, ಕಾಲೇಜಿನ ಬಿ.ಎಸ್.ಡಬ್ಲು ವಿಭಾಗದ ಮುಖ್ಯಸ್ಥ ಪ್ರೊ.ಜೋಸ್ಲಿನ್ ಟಿ., ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.