ದುಷ್ಕರ್ಮಿಗಳಿಂದ ವರ್ತಕನ ಮೇಲೆ ಹಲ್ಲೆ
Update: 2017-03-30 22:48 IST
ಮಡಿಕೇರಿ,ಮಾ.30:ಕ್ಷುಲ್ಲಕ ಕಾರಣಕ್ಕಾಗಿ ಮೊಬೈಲ್ ಅಂಗಡಿಯ ಮಾಲಕರೊಬ್ಬರ ಮೇಲೆ ಮೂವರು ಯುವಕರ ತಂಡ ಹಲ್ಲೆ ನಡೆಸಿರುವ ಘಟನೆ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ.
ಜುಬೇರ್ ಎಂಬುವವರೇ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಆರೋಪಿಗಳು ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬುಧವಾರ ರಾತ್ರಿ ಸುಮಾರು 10.30 ಗಂಟೆಗೆ ಅಂಗಡಿಯಲ್ಲಿದ್ದ ಜುಬೇರ್ ಅವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಕಲಹ ನಡೆಸಿದ ಯುವಕರು ನಂತರ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ನಗರ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ತೀವ್ರಗೊಳಿಸಿದ್ದಾರೆ.