ಅನುಮಾನಾಸ್ಪದ ಸಾವು
Update: 2017-03-30 23:16 IST
ದಾವಣಗೆರೆ, ಮಾ.30: ತಾಲೂಕಿನ ಲೋಕಿಕೆರೆಯಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸಕುಂದುವಾಡ ನಿವಾಸಿ ನಾಗರಾಜ್ (35) ಎಂಬಾತನೆ ಸಾವನ್ನಪ್ಪಿರುವ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪತ್ನಿಯ ಸಂಬಂಧಿಕರು ಹೇಳುತ್ತಿದ್ದಾರೆ. ಆದರೆ, ಮೃತ ನಾಗರಾಜನ ತಾಯಿ ಮತ್ತು ತಮ್ಮ, ನಾಗರಾಜ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಲ್ಲ. ಇದು ಕೊಲೆ. ಮರಣೋತ್ತರ ಪರೀಕ್ಷೆಯ ನಂತರ ಸತ್ಯ ತಿಳಿಯಲಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಹದಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮತ್ತು ಕೊಲೆ ಸಂಬಂಧ ಎರಡು ಪ್ರಕರಣ ದಾಖಲಾಗಿವೆೆ ಎಂದು ಪೊಲೀಸರು ತಿಳಿಸಿದ್ದಾರೆ.