×
Ad

ನ್ಯಾಯಾಧೀಶರತ್ತ ಚಪ್ಪಲಿ ತೂರಿದ ಅಪರಾಧಿ

Update: 2017-03-31 20:36 IST

ವೈನಾಡ್, ಮಾ.31: ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಯೋರ್ವನನ್ನು ವಿಚಾರಣಾ ನ್ಯಾಯಾಲಯವೊಂದು ದೋಷಿ ಎಂದು ತೀರ್ಪು ನೀಡಿದ್ದರಿಂದ ಆಕ್ರೋಶಗೊಂಡ ಆತ ನ್ಯಾಯಾಧೀಶರತ್ತ ಚಪ್ಪಲಿ ತೂರಿದ ಘಟನೆ ನಡೆದಿದೆ.

2014ರಲ್ಲಿ ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದೂ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಆರ್ಮುಗಂ ಎಂಬಾತನ ವಿರುದ್ದ ಪೋಸ್ಕೋ ಕಾಯ್ದೆ ಸೇರಿದಂತೆ ವಿವಿಧ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು, ಆರ್ಮುಗಂಗೆ 21 ವರ್ಷಗಳ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಆತ ನ್ಯಾಯಾಧೀಶರತ್ತ ತನ್ನ ಚಪ್ಪಲಿ ತೂರಿದ್ದ.

ತಕ್ಷಣ ಆತನನ್ನು ಬಂಧಿಸಿದ ಪೊಲೀಸರು ಹೊಸ ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News