ಚಿಕಿತ್ಸೆ ಫಲಕಾರಿಯಾಗದೆ ಗರ್ಭಿಣಿ ಮಹಿಳೆ ಸಾವು
Update: 2017-03-31 21:20 IST
ಮುಳಬಾಗಿಲು, ಮಾ.31: ತಾಲೂಕಿನ ಕುರುಡುಮಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆಗೆ ಬಂದ ಗರ್ಭಿಣಿಯೋರ್ವರು ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ನಾಚಗುಂಡ್ಲಹಳ್ಳಿ ಗ್ರಾಮದ ಅರುಣಾ (23) ಹೆರಿಗೆಗಾಗಿ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು, ಮಧ್ಯ ರಾತ್ರಿಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಆಕೆ ಅಧಿಕ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಯಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ತಾಲೂಕು ಸಿಐ ಸುಧಾಕರ್ ರೆಡ್ಡಿ, ಮುಳಬಾಗಿಲು ನಗರಠಾಣೆ ಸಬ್‌ಇನ್‌ಸ್ಪೆಕ್ಟರ್ ಭೈರಾ ಮತ್ತಿತರಿದ್ದರು.