ಮನೆಗೆ ನುಗ್ಗಿ ಕಳವು
Update: 2017-03-31 22:45 IST
ಕಾರ್ಕಳ, ಮಾ.31: ಆನೆಕೆರೆ ಎಂಬಲ್ಲಿ ಮಾ.27ರಂದು ಮನೆಗೆ ನುಗ್ಗಿದ ಕಳ್ಳರು ಸಾವಿರಾರು ರೂ. ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಆನೆಕೆರೆಯ ಆರ್.ಕೆ.ತಿಲಕ್ ಎಂಬವರ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಚಿನ್ನ, ಬೆಳ್ಳಿಯ ಸೊತ್ತು ಹಾಗೂ 10ಸಾವಿರ ರೂ. ನಗದನ್ನು ಕಳವು ಮಾಡಿದ್ದಾರೆ. ಇವುಗಳ ಒಟ್ಟು ವೌಲ್ಯ 24ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.