×
Ad

ಮಿಯಾಮಿ ಓಪನ್: ಫೆಡರರ್, ಕಿರ್ಗಿಯೊಸ್ ಸೆಮಿಫೈನಲ್‌ಗೆ

Update: 2017-03-31 23:44 IST

ಮಿಯಾಮಿ, ಮಾ.31: ಸ್ವಿಸ್ ಆಟಗಾರ ರೋಜರ್ ಫೆಡರರ್, ಆಸ್ಟ್ರೇಲಿಯದ ನಿಕ್ ಕಿರ್ಗಿಯೊಸ್‌ ಮಿಯಾಮಿ ಓಪನ್ ಪುರುಷರ ಸಿಂಗಲ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

 ಇಲ್ಲಿ ಗುರುವಾರ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಫೆಡರರ್ ಅವರು ಝೆಕ್‌ನ 10ನೆ ಶ್ರೇಯಾಂಕದ ಥಾಮಸ್ ಬೆರ್ಡಿಕ್‌ರನ್ನು 6-2,3-6, 7-6(8/6) ಸೆಟ್‌ಗಳ ಅಂತರದಿಂದ ಮಣಿಸಿದರು. ಈ ಮೂಲಕ ಬೆರ್ಡಿಕ್ ವಿರುದ್ಧ ಏಳನೆ ಬಾರಿ ಜಯ ಸಾಧಿಸಿದರು. ಈ ವರ್ಷ ಆಸ್ಟ್ರೇಲಿಯನ್ ಓಪನ್ ಹಾಗೂ ಇಂಡಿಯನ್ ವೆಲ್ಸ್ ಟೂರ್ನಿಯಲ್ಲಿ ಚಾಂಪಿಯನ್ ಆಗಿರುವ 35ರ ಹರೆಯದ ಸ್ವಿಸ್ ಆಟಗಾರ ಫೆಡರರ್ ಮುಂದಿನ ಸುತ್ತಿನಲ್ಲಿ ಆಸ್ಟ್ರೇಲಿಯದ ನಿಕ್ ಕಿರ್ಗಿಯೊಸ್‌ರನ್ನು ಎದುರಿಸಲಿದ್ದಾರೆ.

ಕಿರ್ಗಿಯೊಸ್ ಮತ್ತೊಂದು ಕ್ವಾರ್ಟರ್ ಫೈನಲ್‌ನಲ್ಲಿ 19ರ ಹರೆಯದ ಜರ್ಮನಿಯ ಅಲೆಕ್ಸಾಂಡರ್ ಝ್ವೆರೆವ್‌ರನ್ನು 6-4, 6-7(9/11), 6-3 ಸೆಟ್‌ಗಳ ಅಂತರದಿಂದ ಮಣಿಸಿದ್ದಾರೆ.

ಒಂದು ವೇಳೆ ಶುಕ್ರವಾರ ನಡೆಯಲಿರುವ ಸೆಮಿ ಫೈನಲ್‌ನಲ್ಲಿ ಫೆಡರರ್ ಜಯ ಸಾಧಿಸಿದರೆ ರವಿವಾರ ನಡೆಯಲಿರುವ ಫೈನಲ್‌ನಲ್ಲಿ ದೀರ್ಘಕಾಲದ ಎದುರಾಳಿ ರಫೆಲ್ ನಡಾಲ್‌ರನ್ನು ಎದುರಿಸಲಿದ್ದಾರೆ. ನಡಾಲ್ ಮತ್ತೊಂದು ಸೆಮಿ ಫೈನಲ್‌ನಲ್ಲಿ ಇಟಲಿಯ ಫ್ಯಾಬಿಯೊ ಫೋಗ್ನಿನಿ ಅವರನ್ನು ಎದುರಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News