ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ ಉತ್ತಮ ಸಾಧನೆ
Update: 2017-03-31 23:52 IST
ಮುಂಬೈ, ಮಾ.31: ಮಹಾರಾಷ್ಟ್ರ ರಾಜ್ಯದ ನಾಸಿಕ್‌ನ ಮೀನಾಬಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 37ನೆ ರಾಷ್ಟ್ರಿೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ 45 ಪ್ಲಸ್ ಮಹಾರಾಷ್ಟ್ರ ರಾಜ್ಯವನ್ನು ಪ್ರತಿನಿಧಿಸಿದ ಸುರೇಖಾ ಹೇಮಂತ್ ದೇವಾಡಿಗ 4x100 ಮೀ. ರೀಲೆಯಲ್ಲಿ ತೃತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ, ಶಾಟ್‌ಪುಟ್‌ನಲ್ಲಿ ದ್ವಿತೀಯ ಸ್ಥಾನದೊಂದಿಗೆ ರಜತ ಪದಕ ಹಾಗೂ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗಳಿಸಿದ್ದಾರೆ.
ಈಕೆ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ದೇರೆಬೈಲು ಕೊಂಚಾಡಿ ಮುಚ್ಚೂರಿನ ದಿ.ುಂದರ ದೇವಾಡಿಗ ಹಾಗೂ ದಿ.ಸಿಂಧೂ ಎಸ್.ದೇವಾಡಿಗ ದಂಪತಿಯ ಪುತ್ರಿ.