ಶ್ರೀನಿವಾಸ್ ಪ್ರಸಾದ್ ವಿರುದ್ಧ ಪ್ರಮೋದ್ ಮಧ್ವರಾಜ್ ಅಭಿಮಾನಿಗಳ ಸಂಘದಿಂದ ಪ್ರತಿಭಟನೆ
Update: 2017-04-01 13:37 IST
ಬೆಂಗಳೂರು, ಎ.1: ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವಿರುದ್ಧ ಕರ್ನಾಟಕ ಪ್ರಮೋದ್ ಮಧ್ವರಾಜ್ ಅಭಿಮಾನಿಗಳ ಸಂಘವು ಆನಂದ್ ರಾವ್ ಸರ್ಕಲ್ ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಪ್ರಮೋದ್ ವಿರುದ್ಧ ಶ್ರೀನಿವಾಸ್ ಪ್ರಸಾದ್ ನೀಡಿರುವ ಹೇಳಿಕೆಯನ್ನು ಪ್ರತಿಭಟನಾಕಾರರು ಖಂಡಿಸಿದರು.
ನಂಜನಗೂಡಿನಲ್ಲಿ ಚುನಾವಣಾ ಪ್ರಚಾರ ಮಾಡುವ ಸಂದರ್ಭದಲ್ಲಿ ಶ್ರೀನಿವಾಸ್ ಪ್ರಸಾದ್ ಅವರು ‘ಪ್ರಮೋದ್ ಮಧ್ವರಾಜ್ ಹಣ ಕೊಟ್ಟು ಸಚಿವರಾಗಿದ್ದಾರೆ’ ಎಂದು ಆರೋಪಿಸಿದ್ದರು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಪ್ರಮೋದ್ ಮಧ್ವರಾಜ್ ಅಭಿಮಾನಿಗಳು, ಈ ಕೂಡಲೇ ಶ್ರೀನಿವಾಸ್ ಪ್ರಸಾದ್ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.