ಧರ್ಮಸ್ಥಳ: ಪ್ರೀತಿಯ ನಾಟಕವಾಡಿ ಬಾಲಕಿಯ ಅತ್ಯಾಚಾರ

Update: 2017-04-01 10:25 GMT

ಬೆಳ್ತಂಗಡಿ, ಎ.1: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಏಳು ಮಂದಿ ಅತ್ಯಾಚಾರ ಎಸಗಿದ್ದು, ಇದರಿಂದ ಆಕೆ ಗರ್ಭಿಣಿಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ನ ಮೇಲೆ ಏಳು ಮಂದಿ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ಪೊಲೀಸರಿಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಏಳು ಮಂದಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಂತ್ರಸ್ತ ಬಾಲಕಿ ಇದೀಗ ಏಳು ತಿಂಗಳ ಗರ್ಭಿಣಿಯಾಗಿದ್ದಾಳೆ.

ಅಸ್ವಸ್ಥ ಬಾಲಕಿಯನ್ನು ಮಂಗಳೂರಿನ ಆಸ್ಪತ್ರೆಗೆ ತಪಾಸಣೆಗೆ ಕರೆದುಕೊಂಡ ಹೋದ ವೇಳೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರ ಆರೋಪಿಗಳ ಪೈಕಿ ಓರ್ವ ಈಕೆಯನ್ನು ಪ್ರೀತಿಸುವ ನಾಟಕವಾಡಿ ಉಳಿದ ಆರು ಮಂದಿಗೆ ಒಪ್ಪಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News