×
Ad

​ಕೋಡಿ ಬ್ಯಾರೀಸ್ ಬಿ.ಎಡ್ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Update: 2017-04-01 15:51 IST

ಕುಂದಾಪುರ, ಎ.1: ಕೋಡಿ ಬ್ಯಾರೀಸ್ ಬಿ.ಎಡ್ ಕಾಲೇಜಿನಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ನಾಟಕ ತರಬೇತಿಯ ಕಾರ್ಯಾಗಾರ ಗುರುವಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಂಶುಪಾಲ ಗೋಪಾಲ ಕೃಷ್ಣರಾವ್ ಕಟಪಾಡಿ ವ್ಯಕ್ತಿತ್ವ ವಿಕಸನದ ಬಗ್ಗೆ ಹಾಗೂ ಬೋಧನಾ ಸಂದರ್ಭ ನಾಟಕದ ವಿಧಾನಗಳನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದರ ಕುರಿತು ಸುದೀರ್ಘ ತರಬೇತಿ ನೀಡಿದರು.

ಸಂಸ್ಥೆಯ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಪ್ರಶಿಕ್ಷಕರು, ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News